M Krishnappa

M Krishnappa

Share

Photos from M Krishnappa's post 15/06/2026

#ಉತ್ತರಹಳ್ಳಿ ಹಾಗೂ #ಸಾರ್ವಭೌಮನಗರ ವಾರ್ಡ್ ಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಸ್ಥಳೀಯ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಯಿತು. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಶ್ರೀ ಹನುಮಂತಯ್ಯ, ಶ್ರೀ ರಮೇಶ್ ರಾಜು, ಸ್ಥಳೀಯ ಮುಖಂಡರು, ನಾಗರಿಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Photos from M Krishnappa's post 13/06/2026

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ GBA ವಾರ್ಡ್ ಗಳಾದ #ಉತ್ತರಹಳ್ಳಿ #ಸುಬ್ರಮಣ್ಯಪುರ, #ಸಾರ್ವಭೌಮನಗರ ಹಾಗೂ #ವಸಂತಪುರ ವಾರ್ಡ್‌ನಲ್ಲಿ ಪ್ರಾರಂಭವಾಗಲಿರುವ (ಮತದಾರರ ವಿಶೇಷ ಪರಿಷ್ಕರಣೆ) ಕಾರ್ಯಕ್ರಮದ ಕುರಿತು ಆಯೋಜಿಸಲಾಗಿದ್ದ BLA-2 (ಬೂತ್ ಲೆವೆಲ್ ಏಜೆಂಟ್) ಗಳ ಸಭೆಯಲ್ಲಿ ಭಾಗವಹಿಸಿ, ಮತದಾರರ ಪಟ್ಟಿಯ ನಿಖರತೆ ಹಾಗೂ ಸಂಘಟನಾತ್ಮಕ ಕಾರ್ಯಗಳ ಕುರಿತು ಚರ್ಚಿಸಲಾಯಿತು.

ಪ್ರತಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಪ್ರಜಾಪ್ರಭುತ್ವದ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಕೇಶವ್ ರಾಜ್, ಪಾಲಿಕೆ ಮಾಜಿ ಸದಸ್ಯರಾದ ಶ್ರೀ ಹನುಮಂತಯ್ಯ, ಶ್ರೀ ರಮೇಶ್ ರಾಜು, ಮುಖಂಡರಾದ ಶ್ರೀ ವಿಜಯ್ ಕುಮಾರ್, ಶ್ರೀ ಉಮೇಶ್, ಸ್ಥಳೀಯ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Photos from M Krishnappa's post 10/06/2026

#ಕೋನಪ್ಪನ ಅಗ್ರಹಾರ ಪುರಸಭೆ ವ್ಯಾಪ್ತಿಯ #ದೊಡ್ಡನಾಗಮಂಗಲ ಸರ್ಕಾರಿ ಪಾಠ ಶಾಲೆಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀ ಜೀ ರವರ ಯಶಸ್ವಿ 12 ವರ್ಷಗಳ ಜನಸೇವಾ ಆಡಳಿತ ಪೂರೈಸಿದ ಸುಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ಹಸಿರು ಪರಿಸರ ನಿರ್ಮಾಣ ಹಾಗೂ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ನಮ್ಮ ಸೇವೆ ಸದಾ ಮುಂದುವರಿಯಲಿದೆ.

ಈ ಸಂದರ್ಭದಲ್ಲಿ ಮುಖಂಡರಾದ ರಾಜೇಶ್ ರೆಡ್ಡಿ ರವರು, ಸ್ಥಳೀಯ ಮುಖಂಡರು, ನಾಗರಿಕರು, ಗ್ರಾಮಸ್ಥರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Photos from M Krishnappa's post 10/06/2026

#ವಸಂತಪುರ ವಾರ್ಡಿನ ವಿಠ್ಠಲನಗರದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ನಮ್ಮೆಲ್ಲರ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ಜೀ ರವರ ಯಶಸ್ವಿ 12 ವರ್ಷಗಳ ಜನಸೇವಾ ಆಡಳಿತ ಪೂರೈಸಿದ ಸುಸಂದರ್ಭದಲ್ಲಿ ನೆರೆದಿದ್ದ ನಾಗರಿಕ ಬಂಧುಗಳಿಗೆ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.

ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸೇವೆಯೇ ನಮ್ಮ ಪ್ರಮುಖ ಸಂಕಲ್ಪವಾಗಿದೆ.

ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ರವರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಆತ್ಮೀಯ ನಾಗರಿಕರು ಉಪಸ್ಥಿತರಿದ್ದರು.

Want your public figure to be the top-listed Public Figure in Bangalore?
Click here to claim your Sponsored Listing.

Category

Telephone

Address


Uttarahalli
Bangalore
560061