Karunakar b devadiga

Karunakar b devadiga

Share

ಪಂಚಮಿ

ನಾಡಿಗೆಲ್ಲ ಸಂಭ್ರಮ ತರುವ ನಾಗಪಂಚಮಿಯು ಮುಂಬರುವ ಗಣೇಶ ಚತುರ್ಥಿ, ವಿಜಯದಶಮಿ, ದೀಪಾವಳಿ ಮೊದಲಾದ ಹಬ್ಬಗಳಿಗೆ ನಾಂದಿ ಹಾಡುತ್ತದೆ. ನಾಗ ಪಂಚಮಿಯಿಂದ ಆರಂಭವಾಗುವ ಹಬ್ಬಗಳ ಸರಣಿಯು ಯುಗಾದಿ ಹಬ್ಬದವರೆಗೂ ಮುಂದುವರಿಯುತ್ತದೆ.

ಇತ್ತೀಚಿನ ವರ್ಷಗಳಲ್ಲಿ ನಾಗ ಪಂಚಮಿ ಹಬ್ಬದ ಗತ್ತು, ಗಮ್ಮತ್ತು ಹಾಗೂ ಅದರ ಮಹತ್ವ ಕಡಿಮೆಯಾಗುತ್ತಿದೆ. ಪಂಚಮಿ ಹಬ್ಬಕ್ಕಾಗಿ ತಿಂಗಳುಗಟ್ಟಲೆ ಕಾತರಿಸುತ್ತಿದ್ದ ಮಕ್ಕಳು, ಮಹಿಳೆಯರು ಈಗ ಹಬ್ಬ ಆಚರಿಸಲು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಜನ ಜೀವನ ತೀರಾ ಯಾಂತ್ರಿಕೃತವಾಗಿದ್ದು, ಜನರು ಹಬ್ಬಗಳನ್ನು ಆಚರಿಸಲು ಮೊದಲಿನ ಉತ್ಸಾಹ ತೋರುತ್ತಿಲ್ಲ.

ಪಂಚಮಿ ಇನ್ನು ಒಂದು ವಾರ ಇರುವಾಗಲೇ ಮಕ್ಕಳು ಹಾಗೂ ಯುವಕರು ಹತ್ತಿರದ ಗಿಡಗಳಿಗೆ ದೊಡ್ಡ ಜೋಕಾಲಿ ಕಟ್ಟಿ ಜೀಕಿ ಸಂಭ್ರಮಿಸುತ್ತಿದ್ದರು. ಪಟ್ಟಣದ ಬಹುತೇಕ ಭಾಗಗಳ ಗಿಡಗಳಲ್ಲಿ ದೊಡ್ಡ ಹಗ್ಗದಿಂದ ನೂರಾರು ಜೋಕಾಲಿಗಳನ್ನು ಕಟ್ಟುತ್ತಿದ್ದರು. ಈಗ ಜೋಕಾಲಿ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದ್ದು, ಪಟ್ಟಣದಲ್ಲಿ ಬೆರಳೆಣಿಕೆಯ ಜೋಕಾಲಿಗಳು ಮಾತ್ರ ಕಂಡುಬರುತ್ತಲಿವೆ.

ಜೋಕಾಲಿಯ ವಿರುದ್ಧ ದಿಕ್ಕಿನ ಗಿಡದ ಟೊಂಗೆಯಲ್ಲಿ ಒಣ ಕೊಬ್ಬರಿ ಬಟ್ಟಲು, ಉತತ್ತಿ, ಉಂಡೆ ಮೊದಲಾದವುಗಳ ಮಾಲೆಯನ್ನು ಮಾಡಿ ತೂಗು ಬಿಡಲಾಗುತ್ತಿತ್ತು. ಯುವಕ, ಯುವತಿಯರು ಜೋಕಾಲಿ ಜೀಕುತ್ತಾ ಮರದ ಇನ್ನೊಂದು ತುದಿಗೆ ಕಟ್ಟಿರುವ ಸರವನ್ನು ಕಾಲಿನಿಂದ ಕಿತ್ತುಕೊಳ್ಳಬೇಕಿತ್ತು. ಇಂತಹ ರೋಮಾಂಚಕ ಸ್ಪರ್ಧೆಗಳು ಈಗ ಮರೆಯಾಗುತ್ತವೆ.

ಪಂಚಮಿ ಹಬ್ಬದಲ್ಲಿ ಯುವಕರ ತಂಡಗಳು ತಮ್ಮ ಓಣಿಯಲ್ಲಿ ಗುಂಪು ಗುಂಪಾಗಿ ಸೇರಿ ಹೊಟ್ಟೆಪ್ಪ (ಕಲ್ಲಿನ ಮೇಲೆ ಕಲ್ಲಿಟ್ಟು ಆಡುವುದು), ತೂರು ಬಿಲ್ಲೆಯಾಟ, ದೂರದವರೆಗೂ ನಿಂಬೆ ಹಣ್ಣು ಎಸೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿಗದಿತ ಸ್ಥಳ ತಲುಪುವುದು ಮೊದಲಾದ ಗ್ರಾಮೀಣ ಹಾಗೂ ಜಾನಪದದ ಆಟಗಳಲ್ಲಿ ತೊಡಗುತ್ತಿದ್ದರು. ಈಗ ಎಲ್ಲರ ಕೈಯಲ್ಲಿಯೂ ಮೊಬೈಲ್ ಬಂದು ಹಬ್ಬದಾಟಗಳು ಹಿನ್ನೆಲೆಗೆ ಸರಿಯುವಂತಾಗಿದೆ.

ಮಾಹಿತಿ: ಕಾಶಿನಾಥ ಬಿಳಿಮಗ್ಗದ (ಪ್ರಜಾವಾಣಿ 20.08.2023)

#ಪಂಚಮಿ #ನಾಗಪಂಚಮಿ #panchami #NagaPanchami #parisaraparivara 20/08/2023

ಪಂಚಮಿ ನಾಡಿಗೆಲ್ಲ ಸಂಭ್ರಮ ತರುವ ನಾಗಪಂಚಮಿಯು ಮುಂಬರುವ ಗಣೇಶ ಚತುರ್ಥಿ, ವಿಜಯದಶಮಿ, ದೀಪಾವಳಿ ಮೊದಲಾದ ಹಬ್ಬಗಳಿಗೆ ನಾಂದಿ ಹಾಡುತ್ತದೆ. ನಾಗ ಪಂಚಮಿಯಿಂದ ಆರಂಭವಾಗುವ ಹಬ್ಬಗಳ ಸರಣಿಯು ಯುಗಾದಿ ಹಬ್ಬದವರೆಗೂ ಮುಂದುವರಿಯುತ್ತದೆ. ಇತ್ತೀಚಿನ ವರ್ಷಗಳಲ್ಲಿ ನಾಗ ಪಂಚಮಿ ಹಬ್ಬದ ಗತ್ತು, ಗಮ್ಮತ್ತು ಹಾಗೂ ಅದರ ಮಹತ್ವ ಕಡಿಮೆಯಾಗುತ್ತಿದೆ. ಪಂಚಮಿ ಹಬ್ಬಕ್ಕಾಗಿ ತಿಂಗಳುಗಟ್ಟಲೆ ಕಾತರಿಸುತ್ತಿದ್ದ ಮಕ್ಕಳು, ಮಹಿಳೆಯರು ಈಗ ಹಬ್ಬ ಆಚರಿಸಲು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಜನ ಜೀವನ ತೀರಾ ಯಾಂತ್ರಿಕೃತವಾಗಿದ್ದು, ಜನರು ಹಬ್ಬಗಳನ್ನು ಆಚರಿಸಲು ಮೊದಲಿನ ಉತ್ಸಾಹ ತೋರುತ್ತಿಲ್ಲ. ಪಂಚಮಿ ಇನ್ನು ಒಂದು ವಾರ ಇರುವಾಗಲೇ ಮಕ್ಕಳು ಹಾಗೂ ಯುವಕರು ಹತ್ತಿರದ ಗಿಡಗಳಿಗೆ ದೊಡ್ಡ ಜೋಕಾಲಿ ಕಟ್ಟಿ ಜೀಕಿ ಸಂಭ್ರಮಿಸುತ್ತಿದ್ದರು. ಪಟ್ಟಣದ ಬಹುತೇಕ ಭಾಗಗಳ ಗಿಡಗಳಲ್ಲಿ ದೊಡ್ಡ ಹಗ್ಗದಿಂದ ನೂರಾರು ಜೋಕಾಲಿಗಳನ್ನು ಕಟ್ಟುತ್ತಿದ್ದರು. ಈಗ ಜೋಕಾಲಿ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದ್ದು, ಪಟ್ಟಣದಲ್ಲಿ ಬೆರಳೆಣಿಕೆಯ ಜೋಕಾಲಿಗಳು ಮಾತ್ರ ಕಂಡುಬರುತ್ತಲಿವೆ. ಜೋಕಾಲಿಯ ವಿರುದ್ಧ ದಿಕ್ಕಿನ ಗಿಡದ ಟೊಂಗೆಯಲ್ಲಿ ಒಣ ಕೊಬ್ಬರಿ ಬಟ್ಟಲು, ಉತತ್ತಿ, ಉಂಡೆ ಮೊದಲಾದವುಗಳ ಮಾಲೆಯನ್ನು ಮಾಡಿ ತೂಗು ಬಿಡಲಾಗುತ್ತಿತ್ತು. ಯುವಕ, ಯುವತಿಯರು ಜೋಕಾಲಿ ಜೀಕುತ್ತಾ ಮರದ ಇನ್ನೊಂದು ತುದಿಗೆ ಕಟ್ಟಿರುವ ಸರವನ್ನು ಕಾಲಿನಿಂದ ಕಿತ್ತುಕೊಳ್ಳಬೇಕಿತ್ತು. ಇಂತಹ ರೋಮಾಂಚಕ ಸ್ಪರ್ಧೆಗಳು ಈಗ ಮರೆಯಾಗುತ್ತವೆ. ಪಂಚಮಿ ಹಬ್ಬದಲ್ಲಿ ಯುವಕರ ತಂಡಗಳು ತಮ್ಮ ಓಣಿಯಲ್ಲಿ ಗುಂಪು ಗುಂಪಾಗಿ ಸೇರಿ ಹೊಟ್ಟೆಪ್ಪ (ಕಲ್ಲಿನ ಮೇಲೆ ಕಲ್ಲಿಟ್ಟು ಆಡುವುದು), ತೂರು ಬಿಲ್ಲೆಯಾಟ, ದೂರದವರೆಗೂ ನಿಂಬೆ ಹಣ್ಣು ಎಸೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಿಗದಿತ ಸ್ಥಳ ತಲುಪುವುದು ಮೊದಲಾದ ಗ್ರಾಮೀಣ ಹಾಗೂ ಜಾನಪದದ ಆಟಗಳಲ್ಲಿ ತೊಡಗುತ್ತಿದ್ದರು. ಈಗ ಎಲ್ಲರ ಕೈಯಲ್ಲಿಯೂ ಮೊಬೈಲ್ ಬಂದು ಹಬ್ಬದಾಟಗಳು ಹಿನ್ನೆಲೆಗೆ ಸರಿಯುವಂತಾಗಿದೆ. ಮಾಹಿತಿ: ಕಾಶಿನಾಥ ಬಿಳಿಮಗ್ಗದ (ಪ್ರಜಾವಾಣಿ 20.08.2023) #ಪಂಚಮಿ #ನಾಗಪಂಚಮಿ #panchami #NagaPanchami #parisaraparivara

Want your business to be the top-listed Business in Pune?
Click here to claim your Sponsored Listing.

Website

Address

Pune